CrimeNational

ಪ್ರಿಯತಮೆಯ ತಾಯಿಯನ್ನು ಗುಂಡಿಕ್ಕಿ ಕೊಂದ 17 ವರ್ಷದ ಬಾಲಕ!

ತನ್ನ ಪ್ರಿಯತಮೆಯ ಮನೆಗೆ ನುಗ್ಗಿದ 17 ವರ್ಷದ ಬಾಲಕ, ಪ್ರಿಯತಮೆಯ ತಾಯಿಗೆ ಗುಂಡು ಹಾರಿಸಿ ಕೊಂದಿದ್ದಾನೆ.. ದೆಹಲಿಯಲ್ಲಿ ಈ ಕೃತ್ಯ ನಡೆದಿದ್ದು, ಇದರಲ್ಲಿ ಮೂವರು ಅಪ್ರಾಪ್ತ ಬಾಲಕರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.. ಮೂವರೂ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ..

17 ವರ್ಷದ ಬಾಲಕ, ಬಾಲಕಿಯನ್ನು ಪ್ರೀತಿ ಮಾಡುತ್ತಿದ್ದ.. ಇವರಿಬ್ಬರ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.. ಈ ಹಿನ್ನೆಲೆಯಲ್ಲಿ ಕೋಪಗೊಂಡ ಬಾಲಕ, ಇತರ ಇಬ್ಬರು ಬಾಲಕರೊಂದಿಗೆ ಮನೆಗೆ ನುಗ್ಗಿದ್ದಾನೆ.. ಪ್ರಿಯತಮೆಯ ತಾಯಿಗೆ ಗುಂಡಿಕ್ಕಿ ಕೊಂದಿದ್ದಾನೆ..

30 ವರ್ಷದ ಮಹಿಳೆಯ ಎದೆಯ ಎಡ ಭಾಗಕ್ಕೆ ಗುಂಡು ಹಾರಿಸಲಾಗಿದೆ.. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.. ಆದ್ರೆ ಪರೀಕ್ಷೆ ಮಾಡಿದ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ..

Share Post