Politics

ʻ400 ಮಹಿಳೆಯರ ಮೇಲೆ ಪ್ರಜ್ವಲ್‌ ಅತ್ಯಾಚಾರ, ಆತ ಮಾಸ್‌ ರೇಪಿಸ್ಟ್‌ʼ; ರಾಹುಲ್‌ ಗಾಂಧಿ

ಶಿವಮೊಗ್ಗ; ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಆಗಿದ್ದು, ಆತನ ಪರವಾಗಿ ಪ್ರಧಾನಿ ಮೋದಿ ಪ್ರಚಾರ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ..

ಶಿವಮೊಗ್ಗದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಜ್ವಲ್‌ ರೇವಣ್ಣ ಪ್ರಕರಣವನ್ನೇ ಮುಖ್ಯವಾಗಿಟ್ಟುಕೊಂಡು ವಾಗ್ದಾಳಿ ನಡೆಸಿದರು.. ಪ್ರಜ್ವಲ್‌ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾನೆ.. ಒಬ್ಬ ಮಾಸ್‌ ರೇಪಿಸ್ಟ್‌ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು..

ರಾಜ್ಯದಲ್ಲಿ ಈಗಾಗಲೇ ಮೊದಲ ಹಂತದ ಮತದಾನ ನಡೆದಿದೆ.. ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.. ಅದಕ್ಕಾಗಿ ಭರ್ಜರಿ ಕ್ಯಾಂಪೇನ್‌ ನಡೆಯುತ್ತಿದೆ.. ಇಂದು ಶಿವಮೊಗ್ಗದಲ್ಲಿ ಬೃಹತ್‌ ಕಾಂಗ್ರೆಸ್‌ ಸಮಾವೇಶ ಏರ್ಪಡಿಸಲಾಗಿತ್ತು.. ರಾಹುಲ್‌ ಗಾಂಧಿ, ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಪರವಾಗಿ ಮತಯಾಚನೆ ಮಾಡಿದರು.. ಈ ವೇಳೆ ಪ್ರಜ್ವಲ್‌ ವಿಚಾರ ಪ್ರಸ್ತಾಪ ಮಾಡಿ ಬಿಜೆಪಿ ನಾಯಕರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

Share Post