ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಮಾಜಿ ಸಚಿವ ರೇವಣ್ಣ
ಬೆಂಗಳೂರು; ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಹಾಜರಾಗದ ಮಾಜಿ ಸಚಿವ ರೇವಣ್ಣ ಈಗ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.. ಇಂದು ಅವರು ಎಸ್ಐಟಿ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಹೇಳಲಾಗಿತ್ತು.. ಆದ್ರೆ ವಿಚಾರಣೆಗೆ ಬಂದಿಲ್ಲ. ಬದಲಾಗಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಹಾಕಿದ್ದಾರೆ.
ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದು, ಇದರಲ್ಲಿ ಮಾಜಿ ಸಚಿವ ರೇವಣ್ಣ ಎ1 ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಎ2 ಆರೋಪಿಗಳಾಗಿದ್ದಾರೆ.. ಪ್ರಜ್ವಲ್‌ರೇವಣ್ಣ ವಿದೇಶದಲ್ಲಿದ್ದು, ಅವರಿಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ. ಇತ್ತ ರೇವಣ್ಣ ಬೆಂಗಳೂರಿನಲ್ಲಿದ್ದರೂ ವಿಚಾರಣೆಗೆ ಹಾಜರಾಗಿಲ್ಲ..
ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ರೇವಣ್ಣ ಈ ನಿರ್ಧಾರ ತೆಗೆದುಕೊಂಡಿದ್ದಾರೆ.. ಒಂದು ವೇಳೆ ಸೆಷನ್ಸ್ ಕೋರ್ಟ್ ನಿಂದ ನಿರೀಕ್ಷಾ ಜಾಮೀನು ಸಿಗದಿದ್ದರೆ ಹೈಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ.
.