Districts

ಅಗಲಿದ ಯುವರತ್ನಗೆ ಪದ್ಮಶ್ರೀ ಗೌರವಕ್ಕೆ ಶಿಫಾರಸು

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ.ಅಧಿವೇಶನದ ಮೊದಲ ದಿನವೇ ಕಲಾಪ ಆರಂಭವಾಗುವುದಕ್ಕೂ ಮೊದಲು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಇನ್ನು ಪುನೀತ್‌ ರಾಜ್‌ಕುಮಾರ್‌ ಅಗಲಿಕೆಗೆ ಸದನದಲ್ಲಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿ, ಮೌನಾಚರಣೆ ಮಾಡಿದರು.
ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಚಿತ್ರರಂಗ ಸೇರಿದಂತೆ ಸಾವಿರೂರು ಅಭಿಮಾನಿಗಳನ್ನು ಅಗಲಿರುವ ಯುವರತ್ನಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ ನೀಡಿದರು.
ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ. ವಿರೋಧ ಪಕ್ಷದವರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಪತ್ರ ಬರೆದಿದ್ದರು.ಹೀಗಾಗಿ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಆಶ್ವಾಸನೆ ನೀಡಿದರು. ಇನ್ನು ಪ್ರತಿಭೆ ಮತ್ತು ಸಾಧನೆಗೆ ಅಲ್ಪಾಯುಷ್ಯ ಇದೆ ಅನಿಸುತ್ತಿದೆ. ಪುನೀತ್ ರಾಜಕುಮಾರ್ ವಿಚಾರದಲ್ಲೂ ಹಾಗೆಯೇ ಆಗಿದೆ. ಪುನೀತ್ ಮರಣ ಆಘಾತವಾಗಿದೆ. ಯಾರೂ ಕೂಡ ಈ ರೀತಿ ಸಾವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ, ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ದಿನಾಂಕವನ್ನು ಶೀಘ್ರ ಪ್ರಕಟ ಮಾಡುವುದಾಗಿ ಹೇಳಿದರು.
ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರ ಪಿ.ಭೋಜರಾಜ ಹೆಗ್ಡೆ, ಹಿರಿಯ ವಿದ್ವಾಂಸ ಕೆ.ಎಸ್.ನಾರಾಯಣಾಚಾರ್ಯ, ಹಿರಿಯ ಬಯಲಾಟ ಕಲಾವಿದೆ ನಾಡೋಜ ಹರಿಜನ ಪದ್ಮಮ್ಮ, ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಿವರಾಂ ಹಾಗೂ ಭಾರತ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್‌ ಅವರಿಗೂ ಕೂಡ ಸಂತಾಪ ಸೂಚಿಸಲಾಯಿತು.

Share Post