ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ದುರ್ಮರಣ
ವಿಜಯಪುರ; ನಿರ್ಮಾಣ ಹಂತದ ಕಟ್ಟಡ ಮೇಲಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಕೂಡಗಿ ಬಳಿಯ ಎನ್ ಟಿಪಿಸಿ ಘಟಕದಲ್ಲಿ ನಡೆದಿದೆ.. ಸುಮಾರು 133 ಅಡಿ ಎತ್ತರದಿಂದ ಬಿದ್ದಿದ್ದರಿಂದ ಕಾರ್ಮಿಕ ಕಿಶನ್ ಕುಮಾರ್ ಭಾರಧ್ವಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಿಶನ್ ಕುಮಾರ್ ಉತ್ತರ ಪ್ರದೇಶದ ಮೂಲದವನು ಎಂದು ತಿಳಿದುಬಂದಿದೆ.. ಈತ ಎನ್ ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.. ಇಲ್ಲಿ ಕಟ್ಟಡವೊಂದರ ನಿರ್ಮಾಣ ಮಾಡಲಾಗಿದ್ದು, ಕಾರ್ಮಿಕ ಕಿಶನ್ ಕುಮಾರ್ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಎನ್ ಟಿಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಳಿಗ್ಗೆಯಿಂದಲೇ ಕೂಡಗಿ ಎನ್‌ಟಿ ಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.