Politics

ನಾನು ತಪ್ಪು ಮಾಡಿಲ್ಲ, ಎಲ್ಲಾ ದೇವರಿಗೆ ಬಿಟ್ಟಿದ್ದೇನೆ; ರೇವಣ್ಣ

ಬೆಂಗಳೂರು; ನಾನು ಯಾವುದೇ ತಪ್ಪು ಮಾಡಿಲ್ಲ. ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನನ್ನ ವಿರುದ್ಧ ಷಡ್ಯಂತ್ರದ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದರು.

  ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ರೇವಣ್ಣ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ.. ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ರೇವಣ್ಣ ಅವರು, ಘಟನೆ ಬಗ್ಗೆ ಹೆಚ್ಚು ಮಾತನಾಡುತ್ತಿಲ್ಲ..

 ಜೈಲಿಂದ ಬಿಡುಗಡೆಯಾದ ರೇವಣ್ಣ ಇವತ್ತು ಹಾಸನಕ್ಕೆ ಹೋಗಬೇಕಾಗಿತ್ತು. ಹಾಸನದಲ್ಲಿ ಅದ್ಧೂರಿ ಸ್ವಾಗತಕ್ಕೆ ಪ್ಲ್ಯಾನ್ ಮಾಡಲಾಗಿತ್ತು. ಆದ್ರೆ, ನಾನೆಲ್ಲೂ ಹೋಗಲ್ಲ ಎಂದಿರುವ ರೇವಣ್ಣ, ಬೆಂಗಳೂರಲ್ಲೇ ಇದ್ದು ಕಾನೂನು ಹೋರಾಟ ಮುಂದುವರೆಸಿದ್ದಾರೆ. ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ದೇವೇಗೌಡರ ಸಲಹೆ ಪಡೆದು ಹೆಜ್ಜೆ ಇಟ್ಟಿದ್ದಾರೆ.

Share Post