Bengaluru

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ; ರೂಪರೇಷೆ ಸಿದ್ಧಪಡಿಸಲು ಕಾಂಗ್ರೆಸ್‌ ಸಭೆ

ಬೆಂಗಳೂರು: ಮೇಕೆದಾಟು ಅಣೆಕಟ್ಟೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯ ರೂಪರೇಷೆಗಳ ಬಗ್ಗೆ ಸಮಾಲೋಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು.

ಕ್ವೀನ್ಸ್‌ ರೆಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಂಗಳೂರು ನಗರದ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧೃವನಾರಾಯಣ್, ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವರಾದ ಆಂಜನಮೂರ್ತಿ, ಮೋಟಮ್ಮ, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್, ಸಹ ಅಧ್ಯಕ್ಷರಾದ ವಿ.ಆರ್. ಸುದರ್ಶನ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

Share Post