CrimeDistricts

ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ; ತಡ ರಾತ್ರಿ ಡ್ರಾಪ್ ಕೊಡುತ್ತೇನೆಂದು ಇಬ್ಬರು ವಿದ್ಯಾರ್ಥನಿಯರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋದ ದುರುಳನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ವಿದ್ಯಾರ್ಥಿನಿಯರು 112ಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.. ಚಿಕ್ಕಬಳ್ಳಾಪುರ ಜಿಲ್ಲೆ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ..

  ವಿದ್ಯಾರ್ಥಿನಿಯರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು.. ಈ ವೇಳೆ ಪೋಲಕುಂಟಹಳ್ಳಿ ನಿವಾಸಿ ಶ್ರೀಕಾಂತ್ ಡ್ರಾಪ್ ಕೊಡುತ್ತೇನೆ ಎಂದು ನಂಬಿಸಿದ್ದಾನೆ.. ಬೈಕ್ ನಲ್ಲಿ ಇಬ್ಬರನ್ನೂ ಕೂರಿಸಿಕೊಂಡು ಅರಣ್ಯದ ಕಡೆ ಕರೆದೊಯ್ದಿದ್ದಾನೆ.. ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ..

  ಈ ವೇಳೆ ಆತನಿಂದ ತಪ್ಪಿಸಿಕೊಂಡ ವಿದ್ಯಾರ್ಥಿಯರು ಪೊಲೀಸರಿಗೆ ಕರೆ ಮಾಡಿದ್ದಾರೆ.. ಅವರಿದ್ದ ಲೋಕೇಷನ್ ಟ್ರೇಸ್ ಮಾಡಿದ ಪೊಲೀಸರು, ವಿದ್ಯಾರ್ಥಿನಿಯರನ್ನ ರಕ್ಷಣೆ ಮಾಡಿದ್ದಾರೆ.. ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ..

 

Share Post