ಪ್ರಜ್ವಲ್ ಎಲ್ಲಿದ್ದರೂ ಭಾರತಕ್ಕೆ ಬಂದ್ಬಿಡಪ್ಪ; ದೇವೇಗೌಡ
ಬೆಂಗಳೂರು; ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರಿಲೀಸ್ ಆದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿ ಸೇರಿಕೊಂಡಿದ್ದಾರೆ.. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.. ಪ್ರಜ್ವಲ್ ನೀನು ಎಲ್ಲದ್ದರೂ ಕೂಡಲೇ ಭಾರತಕ್ಕೆ ಬಂದುಬಿಡು ಎಂದು ಹೇಳಿದ್ದಾರೆ..
ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಎಂದೂ ದೇವೇಗೌಡರು ಹೇಳಿದ್ದಾರೆ..