Districts

ಪೂರ್ಣಚಂದ್ರ ತೇಜಸ್ವಿ ಅವರ ಮಡದಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

ಚಿಕ್ಕಮಗಳೂರು : ಕವಿ ಪೂರ್ಣಚಂದ್ರ ತೇಜಸ್ವಿ ಅವರ ಮಡದಿ ರಾಜೇಶ್ವರಿ ಕೊನೆಯುಸಿರೆಳೆದಿದ್ದಾರೆ. 84 ವರ್ಷ ವಯಸ್ಸಿನವರಾದ ರಾಜೇಶ್ವರಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಕಳೆದ ಮೂರ್ನಾಲ್ಕು ದಿನದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇಂದು ವಿಧಿವಶರಾಗಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಅವರ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್‌ಪೋಸ್ಟ್‌ ನಲ್ಲಿ ವಾಸವಾಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆನ ಬಂದಿದ್ದರು.

Share Post