Politics

ಮೇ 31ಕ್ಕೆ ಬರ್ತೀನಿ; ಪ್ರಜ್ವಲ್ ವಿಡಿಯೋ ಸಂದೇಶ

ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

Share Post