Districts

ಕೋಲಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಭರ್ಜರಿ ಗೆಲುವು

ಕೋಲಾರ: ಕೋಲಾರ ವಿಧಾನಪರಿಷತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್‌.ಅನಿಲ್‌ ಕುಮಾರ್‌ ಒಟ್ಟು 1713 ಮತಗಳನ್ನು ಪಡೆದು 426 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ.ವೇಣುಗೋಪಾಲ್‌ 1287 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇನ್ನು ಜೆಡಿಎಸ್‌ ಅಭ್ಯರ್ಥಿ ಕೂಡಾ ಸಾಕಷ್ಟು ಫೈಟ್‌ ಕೊಟ್ಟಿದ್ದರು, ಅವರು 1070 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಸಚಿವ ಡಾ.ಕೆ.ಸುಧಾಕರ್‌ ಈ ಕ್ಷೇತ್ರವನ್ನು ಬಹಳ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದ್ದರು. ಬಿಜೆಪಿ ಅಭ್ಯರ್ಥಿಯನ್ನು ಗೆದ್ದೇ ಗೆಲ್ಲಿಸುವ ಪಣ ತೊಟ್ಟಿದ್ದರು. ಆದರೆ ಶ್ರಮ ಫಲಿಸಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್‌.ಅನಿಲ್‌ ಕುಮಾರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.

 

ವೇಣುಗೋಪಾಲ್‌

Share Post