Politics

ಮೂರನೇ ಬಾರಿ ಗೆಲುವು, ದೇಶದ ಇತಿಹಾಸದಲ್ಲೇ ಐತಿಹಾಸಿಕ ಸಾಧನೆ; ಪ್ರಧಾನಿ ಮೋದಿ ಟ್ವೀಟ್‌

ನವದೆಹಲಿ; ಮತ ಎಣಿಕೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮಾಡಿ ದೇಶದ ಜನಕ್ಕೆ ಧನ್ಯವಾದ ತಿಳಿಸಿದ್ದಾರೆ.. ಸತತ ಮೂರನೇ ಬಾರಿ ದೇಶದ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ.. ಇದು ಭಾರತ ದೇಶದ ಇತಿಹಾಸದಲ್ಲೇ ಐತಿಹಾಸಿಕ ಸಾಧನೆ ಎಂದು ಮೋದಿ ಹೇಳಿದ್ದಾರೆ..

ಜನರ ಈ ಪ್ರೀತಿಗಾಗಿ ನಾನು ನಮಸ್ಕರಿಸುತ್ತೇನೆ. ಕಳೆದ ಹತ್ತು ವರ್ಷಗಳಿಂದ ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸಿದ್ದೇವೆ.. ಅದನ್ನು ಮುಂದೆಯೂ ಮುಂದುವರೆಸುತ್ತೇವೆ..  ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಕೃತಜ್ಞತೆ ಹೇಳಲು ನನ್ನಲ್ಲಿ ಪದಗಳಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Share Post