ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ರಾಜೀನಾಮೆ; ಕಾರಣ ಏನು ಗೊತ್ತಾ..?
ಮುಂಬೈ; ದೆಹಲಿಯಲ್ಲಿ ರಾಜಕೀಯ ಮೇಲಾಟಗಳು ನಡೆಯುತ್ತಿರುವಾಗಲೇ ಮಹಾರಾಷ್ಟ್ರದಲ್ಲಿ ಒಂದು ರಾಜಕೀಯ ಬೆಳವಣಿಗೆ ನಡೆದಿದೆ.. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ತಮ್ಮ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.. ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ತುಂಬಾ ನಿರಾಶಾದಾಯಕ ಪ್ರದರ್ಶನ ನೀಡಿದೆ.. ಈ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ..
ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳೆದ ಬಾರಿ 23 ಸ್ಥಾನಗಳಲ್ಲಿ ಗೆದ್ದಿತ್ತು.. ಆದ್ರೆ ಈ ಬಾರಿ ಅದು 9 ಸ್ಥಾನಗಳಿಗೆ ಕುಸಿದಿದೆ.. ಇದರಿಂದಾಗಿ ಡಿಸಿಎಂ ದೇವೇಂದ್ರ ಫಡ್ನವಿಸ್ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.. ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.. ಮುಂಬರುವ ವಿಧಾನಸಭಾ ಚುನಾವಣೆಯ್ಲಿ ಉತ್ತಮ ಫಲಿತಾಂಶ ಬರುವುದಕ್ಕಾಗಿ ನಾನು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ..