CrimePolitics

ಕೊನೆಗೂ ಬಂಧನ ಭೀತಿಯಿಂದ ತಪ್ಪಿಸಿಕೊಂಡ ಭವಾನಿ ರೇವಣ್ಣ; ಸಿಕ್ತು ಜಾಮೀನು!

ಬೆಂಗಳೂರು; ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿದ್ದ ಭವಾನಿ ರೇವಣ್ಣ ಕೊನೆಗೂ ಬಂಧನದ ಭೀತಿಯಿಂದ ಹೊರಬಂದಿದ್ದಾರೆ.. ಕೆಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದೇ ಭವಾನಿ ರೇವಣ್ಣ ನಾಪತ್ತೆಯಾಗಿದ್ದರು.. ಎಸ್‌ಐಟಿ ಅಧಿಕಾರಿಗಳು ಅವರ ಮನೆಗೆ ಹೋದರೂ ಸಿಕ್ಕಿರಲಿಲ್ಲ.. ಬಂಧನದ ಭೀತಿಯಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿದೆ..

ಕೆಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಭವಾನಿ ರೇವಣ್ಣ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.. ಹೈಕೋರ್ಟ್‌ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.. ಜೊತೆಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಕೋರ್ಟ್‌ ಸೂಚನೆ ನೀಡಿದೆ..

ಮಧ್ಯಂತರ ಜಾಮೀನು ಸಿಕ್ಕಿರುವುದರಿಂದ ಭವಾನಿಯವರು ಬಂಧನದಿಂದ ತಪ್ಪಿಸಿಕೊಂಡಿದ್ದಾರೆ… ಶೀಘ್ರದಲ್ಲೇ ಎಸ್‌ಐಟಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.. ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಪಾತ್ರ ಇದೆ ಎಂಬ ಆರೋಪವಿದೆ.. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರು.. ಇನ್ನು ಇದೇ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಬಂಧನವಾಗಿತ್ತು.. ಅವರು ಇದೀಗ ಜಾಮೀನಿನ ಮೇಲೆ ಹೊರಗಿದ್ದಾರೆ..

Share Post