National

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ ದಂಪತಿ

ವಾರಾಣಸಿ: ಕಾಶಿ ವಿಶ್ವನಾಥ್‌ ಕಾರಿಡಾರ್‌ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅವರ ಪತ್ನಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದೆ.
    ಸುಮಾರು 300ಕ್ಕೂ ಹೆಚ್ಚು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ದೇಗುಲ ಕಾರಿಡಾರ್‌ ನಿರ್ಮಿಸಲಾಗಿತ್ತು. ಈ ಮೂಲಕ ಐತಿಹಾಸಿಕ ಕಾಶಿ ವಿಶ್ವನಾಥ ದೇಗುಲವನ್ನು ಜೀರ್ಣೋದ್ಧಾರ ಮಾಡಲಾಗಿತ್ತು. ಅದರ ಲೋಕಾರ್ಯಣೆ ಕಾರ್ಯಕ್ರಮವನ್ನು ಮೊನ್ನೆ ಆಯೋಜಿಸಲಾಗಿತ್ತು. ಒಂದು ತಿಂಗಳ ಕಾಲ ವಾರಾಣಸಿಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಇಂತಹ ಅದ್ದೂರಿ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಇದೇ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ ದಂಪತಿ ಉಭಯ ಕುಶಲೋಪರಿ ವಿಚಾರಿಸಿದರು.
Share Post