ಮಂಗಳೂರಿನಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ; ಬಿಜೆಪಿ ವಿಜಯೋತ್ಸವ ಮುಗಿಸಿ ಹೋಗುತ್ತಿದ್ದಾಗ ದಾಳಿ!
ಮಂಗಳೂರು; ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಹೋಗುತ್ತಿದ್ದ ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ.. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಈ ದಾಳಿ ನಡೆದಿದ್ದು, ಹರೀಶ್(41), ನಂದಕುಮಾರ್(24) ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.. ಇದೇ ವೇಳೆ ಕೃಷ್ಣಕುಮಾರ್ ಎಂಬಾತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೇಳಲಾಗಿದೆ.. ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.. ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ..
ದಕ್ಷಿಣಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ಮಾಡಲಾಗಿತ್ತು.. ಇದರಲ್ಲಿ ಪಾಲ್ಗೊಂಡಿದ್ದ ಮೂವರು ಯುವಕರು, ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದೆ.. ಈ ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗ್ತಿದ್ದು, ಈ ಕಾರಣಕ್ಕೆ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ..
20-25 ಮುಸ್ಲಿಂ ಯುವಕರ ತಂಡ ಬೈಕ್‌ಗಳಲ್ಲಿ ಬಿಜೆಪಿ ಕಾರ್ಯಕರ್ತನ್ನು ಹಿಂಬಾಲಿಸಿ ವಾಗ್ವಾದ ಮಾಡಿದೆ. ಇದೇ ವೇಳೆ ಚಾಕುವಿನಿಂದ ಇರಿಯಲಾಗಿದೆ ಎಂದು ತಿಳಿದುಬಂದಿದೆ..