HDK ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರಲ್ಲಿ ಮನವಿ ಮಾಡಿದ ಮಾಜಿ ಸಿಎಂ
ಬೆಂಗಳೂರು : ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹುಟ್ಟಿದ ಹಬ್ಬ. ಈ ಪ್ರಯುಕ್ತ HDK ಅವರು ಟ್ವೀಟ್ ಮೂಲಕ ತಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟ್ವೀಟ್ ಅಲ್ಲಿ ಏನಿದೆ
ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ, ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ, ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ,
ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ
ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ.
ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ. 4/4
— H D Kumaraswamy (@hd_kumaraswamy) December 14, 2021