ಪ್ರತಿಭಟನೆ ವೇಳೆ ಕುಸಿದುಬಿದ್ದು ಬಿಜೆಪಿ ನಾಯಕ ಸಾವು
ಶಿವಮೊಗ್ಗ; ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ