CrimeDistricts

ಸರ್ಕಾರಿ ಉದ್ಯೋಗಿ ವಸತಿಗೃಹದಲ್ಲಿ ಅನುಮಾನಾಸ್ಪದ ಸಾವು!; ಕಾರಣ ನಿಗೂಢ!

ಕಲಬುರಗಿ; ಸರ್ಕಾರಿ ಮಹಿಳಾ ಉದ್ಯೋಗಿಯೊಬ್ಬರು ವಸತಿ ಗೃಹದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.. ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ..

ಕುಂಚಾವರಂ ಗ್ರಾಮದ ಸಿಎಚ್‌ಸಿಯ ಡಿ ಗ್ರೂಪ್‌ ಉದ್ಯೋಗಿ 29 ವರ್ಷದ ಮಾಲಾಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.. ಇವರು ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲೇ ಸಾವನ್ನಪ್ಪಿದ್ದಾರೆ.. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.. ಕುಂಚಾವರಂ ಪೊಲೀಸರು ತನಿಖೆ ಶುರು ಮಾಡಿದ್ದಾರೆ..

 

Share Post