ನದಿಗೆ ಉರುಳಿದ ಸಾರಿಗೆ ಬಸ್: ಮೃತರ ಸಂಖ್ಯೆ 9ಕ್ಕೆ ಏರಿಕೆ
ಪಶ್ಚಿಮ ಗೋವಾವರಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್ ದುರಂತ ಸಂಭವಿಸಿದೆ. ಇಲ್ಲಿನ ಜಂಗಾರೆಡ್ಡಿ ಗುಡೆಂ ಬಳಿ ಆಂಧ್ರ ಸಾರಿಗೆ ಸಂಸ್ಥೆ ಬಸ್ ನದಿಗೆ ಉರುಳಿದ್ದು, ಒಂಭತ್ತು ಪ್ರಯಾಣಿಕರು ದುರಂತ ಸಾವಿಗೀಡಾಗಿದ್ದಾರೆ.
ಬಸ್ನಲ್ಲಿ ನಲವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಹಲವರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಇನ್ನೂ ೨೬ ಮಂದಿ ಬಸ್ನಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಬಸ್ನಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಬಸ್ ದುರಂತದ ಬಗ್ಗೆ ಮಾತನಾಡಿರುವ ಆಂಧ್ರ ಪ್ರದೇಶ ಸಿಎಂ ಜಗನ್ಮೋಹನ್ ರೆಡ್ಡಿ, ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಿದ್ದಾರೆ.