BengaluruPolitics

ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಪ್ರತ್ಯೇಕವಾಗಬೇಕು; ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು;  ಡಿ.ಕೆ.ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಮನವಿ ಮಾಡಿದ್ದ  ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ರಾಜ್ಯದ ಇಬ್ಭಾಗದ ಮಾತಾಡಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ರಾಜ್ಯ ಇಬ್ಭಾಗ ಆಗಬೇಕು ಎಂದಿದ್ದಾರೆ..

  ಈ ಬಗ್ಗೆ ಮಾತನಾಡಿರುವ ಸ್ವಾಮೀಜಿ, ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದು ವೈಜ್ಞಾನಿಕವಾಗಿ ಅಷ್ಟೆ. ಅಂದು ಇನ್ನೂ ಮೂರು ಅಂಶಗಳನ್ನು ಪ್ರಸ್ತಾಪಿಸಿದ್ದೆ. ಅದರಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂದಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಮತ್ತು ನಿಲುವಿಗೆ ಇಂದೂ ಸಹ ಬದ್ಧನಾಗಿದ್ದೇನೆ ಎಂದು ಸ್ವಾಮೀಜಿ ಹೇಳಿದ್ದಾರೆ.

 

Share Post