CrimeDistricts

ಶಿವಮೊಗ್ಗದಲ್ಲಿ ಭೀಕರ ಅಪಘಾತ; ಮೂವರ ದುರ್ಮರಣ!

ಶಿವಮೊಗ್ಗ; ಶಿವಮೊಗ್ಗದಲ್ಲಿ ಭೀಕರ ಅಪಘಾತ ನಡೆದಿದೆ..  ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದೆ.. ಘಟನೆಯ್ಲಿ ಮೂವರು ಸಾವನ್ನಪ್ಪಿದ್ದಾರೆ.. ಕಾರಿನಲ್ಲಿ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಸ್ವಿಫ್ಟ್‌ ಕಾರು ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು.. ಇನ್ನೋವಾ ಕಾರು ಶಿವಮೊಗ್ಗ ಕಡೆಯಿಂದ ಸಿಗಂದೂರು ಕಡೆ ಹೋಗುತ್ತಿತ್ತು.. ಈ ವೇಳೆ ಎರಡೂ ಮುಖಾಮುಖಿ ಡಿಕ್ಕಿಯಾಗಿವೆ.. ಸ್ವಿಫ್ಟ್‌ ಕಾರಿನಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ..

ಓವರ್‌ ಟೇಕ್‌ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ.. ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಆರು ಮಂದಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ.. ಇದರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ..

 

Share Post