CrimeDistricts

ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

ದಾವಣಗೆರೆ; ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ (41) ವಿಷಯ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ..

ಪ್ರತಾಪ್‌ ಕುಮಾರ್‌ ಅವರು ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ, ಕಾರಿನಲ್ಲೇ ವಿಷ ಸೇವಿಸಿದ್ದಾರೆ.. ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.. ಅನಂತರ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.. ಆದ್ರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ..

ಪ್ರತಾಪ್‌ ಕುಮಾರ್‌ ಅವರು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರ ಮಗಳ ಗಂಡನಾಗಿದ್ದು, 15 ವರ್ಷಗಳ ಹಿಂದೆ ಬಿ.ಸಿ.ಪಾಟೀಲ್‌ ಅವರ ಹಿರಿಯ ಮಗಳು ಸೌಮ್ಯಾ ಅವರನ್ನು ಮದುವೆಯಾಗಿದ್ದರು.. ಅವರು ಯಾಕೆ ಈ ರೀತಿ ಮಾಡಿಕೊಂಡರು ಎಂಬುದರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

Share Post