ಸಿದ್ದರಾಮಯ್ಯಗೆ ಕಂಟಕವಾಗುತ್ತಾ ಮೂಡಾ ಹಗರಣ..?; ಪಾದಯಾತ್ರೆಗೆ ರಾಜ್ಯ ಬಿಜೆಪಿ ಸಿದ್ಧತೆ..!
ಮೈಸೂರು; ತಮ್ಮ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಕಳಂಕ ಹೊರದ ಸಿಎಂ ಸಿದ್ದರಾಮಯ್ಯ ಇದೀಗ ಗಂಭೀರ ಆರೋಪವನ್ನು ಎದುರಿಸುತ್ತಿದ್ದಾರೆ.. ಮುಡಾದಲ್ಲಿ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದೆ.. ಸಿಎಂ ಸಿದ್ದರಾಮಯ್ಯ ನನ್ನ ಪತ್ನಿಗೆ ಸೇರಿದ ಜಾಗವನ್ನು ಮುಡಾ ಸ್ವಾಧೀನ ಮಾಡಿಕೊಂಡಿತ್ತು.. ಇದಕ್ಕೆ ಪ್ರತಿಯಾಗಿ ಬದಲಿ ನಿವೇಶನಗಳನ್ನು ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ.. ಆದ್ರೆ ವಿರೋಧ ಪಕ್ಷಗಳು ಹೆಚ್ಚು ಬೆಲೆಬಾಳವ ಜಾಗ ಪಡೆದಿದ್ದಾರೆ ಎಂದು ಆರೋಪಿಸುತ್ತಿವೆ.. ಇನ್ನು ಒಟ್ಟಾರೆ ಮೂಡಾದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ.. ಈ ಬೆನ್ನಲ್ಲೇ ಬಿಜೆಪಿ ಪಕ್ಷ ಈ ವಿಚಾರವನ್ನು ಸೀರಿಯಸ್ಸಾಗಿ ತೆಗೆದುಕೊಂಡು, ಸರ್ಕಾರದ ವಿರುದ್ಧ ಹೋರಾಡಲು ಮುಂದಾಗಿದೆ..
ಒಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ಸಿಎಂ ಕುಟುಂಬದ ವಿರುದ್ಧ ದೂರು ನೀಡಿದ್ದಾರೆ.. ಇನ್ನೊಂದೆಡೆ ಸಾಮಾಜಿಕ ಹೋರಾಟಗಾರ ಅಬ್ರಹಾಂ ಅವರು ಕೂಡಾ 2013ರ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ತಮ್ಮ ಪತ್ನಿಯ ಆಸ್ತಿಯ ಬಗ್ಗೆ ಮಾಹಿತಿ ನೀಡಿಲ್ಲ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.. ಹೀಗಾಗಿ ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾ ವಿಚಾರ ಸಂಕಷ್ಟ ತೊಂದೊಡ್ಡಬಹುದು ಎಂದು ಹೇಳಲಾಗುತ್ತಿದೆ..
ಇದನ್ನೂ ಓದಿ; ಲಿಂಗ ಬದಲಾವಣೆ ಮಾಡಿಕೊಂಡು ಪುರುಷನಾಗಿ ಬದಲಾದ ತೆಲಂಗಾಣದ IRS ಅಧಿಕಾರಿ!
ಇನ್ನು ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿನ ಅಕ್ರಮದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಲ್ಲಿ ದೊಡ್ಡ ಹೋರಾಟಕ್ಕೆ ಮುಂದಾಗಿದೆ.. 2010ರಲ್ಲಿ ಸಿದ್ದರಾಮಯ್ಯ ಅವರು ಬಳ್ಳಾರಿ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು.. ಇದೀಗ ಬಿಜೆಪಿ ಕೂಡಾ ಅದೇ ರೀತಿಯ ಪಾದಯಾತ್ರೆಗೆ ಪ್ಲ್ಯಾನ್ ಮಾಡುತ್ತಿದೆ.. ಮುಡಾ ಅಕ್ರಮದ ವಿರುದ್ಧ ಹೋರಾಡಲು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಿ ಜನರ ಗಮನ ಸೆಳೆಯೋದಕ್ಕೆ ರಾಜ್ಯ ಬಿಜೆಪಿ ಮುಂದಾಗಿದೆ.. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.. ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ..
ಇದನ್ನೂ ಓದಿ; ಆಸ್ತಿ ವಿಚಾರಕ್ಕೆ ಜಗಳ!; ಸ್ವಂತ ಅಕ್ಕನ ಮೇಲೆ ಗೊಡ್ಡಲಿಯಿಂದ ದಾಳಿ!
ಇನ್ನು ಸೋಮವಾರದಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲೂ ಮುಡಾ ಹಾಗೂ ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಗಳ ಬಗ್ಗೆ ಹೋರಾಟ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಂದಾಗಿವೆ..