Budget-2024; ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ನಿರ್ಮಾಣ!
ನವದೆಹಲಿ; ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆಗಳನ್ನು ನೀಡಲಾಗುತ್ತಿದೆ.. ಅದ್ರಲ್ಲೂ ಕೂಡಾ ಈ ಬಾರಿ ಉತ್ಪಾದನಾ ವಲಯ ಹಾಗೂ ಉದ್ಯೋಗ ಸೃಷ್ಟಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ.. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಇದರಲ್ಲಿ ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ..
26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ ಮಾಡುವುದಾಗಿ ತಿಳಿಸಿದ್ದಾರೆ.. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ.. ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇತ್ತ ಆಂಧ್ರಪ್ರದೇಶದ ಪೋಲಾವರಂ ಪ್ರಾಜೆಕ್ಟ್ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದೂ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.