ವಿಧಾನಸಭೆಯಲ್ಲಿ ನೀಟ್ ಪರೀಕ್ಷೆ ರದ್ದು ನಿರ್ಣಯ ಅಂಗೀಕಾರ!
ಬೆಂಗಳೂರು; ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂಲಕ ನಡೆಸುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.. ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, ಪರಿಷತ್ನಲ್ಲೂ ಮಸೂದೆ ಅಂಗೀಕಾರಗೊಂಡರೆ ಕರ್ನಾಟಕ ಸರ್ಕಾರ ಆದ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುತ್ತದೆ..
ಇದನ್ನೂ ಓದಿ; ಬಿಜೆಪಿ ಮೇಯರ್ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ಮಹಿಳೆ!
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು.. ನೀಟ್ ಪರೀಕ್ಷೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದರಿಂದ ರಾಜ್ಯದ ಗ್ರಾಮೀಣ ಮಕ್ಕಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.. ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನೀಡುವ ರಾಜ್ಯ ಸರ್ಕಾರಗಳ ಹಕ್ಕನ್ನೂ ಕಿತ್ತುಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.. ನೀಟ್ ಪರೀಕ್ಷೆಯಿಂದ ಕರ್ನಾಟಕ ರಾಜ್ಯಕ್ಕೆ ವಿನಾಯಿತಿ ನೀಡಬೇಕು ಎಂದು ಮಸೂದೆ ಮಂಡಿಸಲಾಯಿತು..
ಇದನ್ನೂ ಓದಿ; ಜೈಲಿನಲ್ಲಿ ಮೊಬೈಲ್ಗಳು, ಗಾಂಜಾ, ಡ್ರಗ್ಸ್ ಪತ್ತೆ..!; ಈ ಜೈಲಲ್ಲಿ ಬೇಕಾದ್ದು ಸಿಗುತ್ತೆ..!
ಈಗಾಗಲೇ ಹಳೆಯ ಪದ್ಧತಿಗೆ ಹಿಂತಿರುಗಲು ತಮಿಳುನಾಡು, ಪಶ್ಚಿಮ ಬಂಗಾಳ ಕೂಡ ಮುಂದಾಗಿದ್ದು, ಆ ಸಾಲಿಗೆ ಈಗ ಕರ್ನಾಟಕ ಕೂಡಾ ಸೇರ್ಪಡೆಯಾಗಿದೆ.