BengaluruPolitics

ಮೈಸೂರಿಗೆ ಬಿಜೆಪಿ ಪಾದಯಾತ್ರೆ; ಕೌಂಟರ್‌ ಕೊಡಲು ಕಾಂಗ್ರೆಸ್‌ ಸಿದ್ಧತೆ!

ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿನ ನೂರಾರು ಕೋಟಿ ಹಗರಣ ಹಾಗೂ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟ್‌ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಪಾದಯಾತ್ರೆಗೆ ಮುಂದಾಗಿದ್ದಾರೆ.. ಶನಿವಾರದಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗುತ್ತದೆ.. ಇದಕ್ಕೆ ಕೌಂಟರ್‌ ಕೊಡುವುದಕ್ಕಾಗಿ ಕಾಂಗ್ರೆಸ್‌ ಚಿಂತನೆ ನಡೆಸಿದೆ.. ಬಿಜೆಪಿ ಪಾದಯಾತ್ರೆ ನಡೆಸುತ್ತಿದ್ದರೆ, ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಮುಂದಾಗಿದೆ.. ಸಿದ್ದರಾಮಯ್ಯ ಅವರು ಮತ್ತೊಮ್ಮೆ ಅಹಿಂದ ಅಸ್ತ್ರ ಪ್ರಯೋಗ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ನಾಗ್ಪುರದ ರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡುತ್ತಾ ಜಗಳವಾಡಿಕೊಂಡ ದಂಪತಿ!

ಕೌಂಟರ್‌ ಕೊಡದೇ ಹೋದರೆ ಬಿಜೆಪಿ ಹೋರಾಟ ಜೋರಾಗುತ್ತದೆ.. ಕೊನೆಗೆ ಇದು ಸರ್ಕಾರದ ಬುಡಕ್ಕೆ ಬರುತ್ತದೆ.. ಈ ಹಿನ್ನೆಲೆಯಲ್ಲಿ ಈಗಲೇ ಕೌಂಟರ್‌ ಕೊಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.. ಅದ್ರಲ್ಲೂ ಸಿದ್ದರಾಮಯ್ಯ ಅವರ ಆಪ್ತರು ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಿ, ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ತಪ್ಪು ಮಾಡಿಲ್ಲ, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ನಡೆಯುತ್ತಿರುವ ಕುತಂತ್ರ ಇದು ಎಂದು ಜನರಿಗೆ ಅರಿವು ಮೂಡಿಸುವ ಪ್ರಯತ್ನಕ್ಕೆ ಕೈಹಾಕಲಾಗಿದೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ಈ ಆರು ರಾಶಿಗಳವರಿಗೆ ಹಣದ ಸಮಸ್ಯೆಯಿಂದ ಪೂರ್ತಿ ವಿಮುಕ್ತಿ!

ಇನ್ನು ಬಿಜೆಪಿ ಪಾದಯಾತ್ರೆಗೆ ಪರ್ಯಾಯವಾಗಿ ಮತ್ತೊಂದು ಪಾದಯಾತ್ರೆ ಮಾಡೋದಕ್ಕೂ ಸಿಎಂ ಆಪ್ತರು ನಿರ್ಧರಿಸಿದ್ದಾರೆ ಎನ್ನಲಾಗಿದೆ.. ಶೋಷಿತ ಸಮುದಾಯಗಳ ಒಕ್ಕೂಟದ ಮುಖಂಡರು ಪಾದಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಅಮೆರಿಕ ಮಹಿಳೆಯನ್ನು ಕಾಡಿನಲ್ಲಿ ಕಟ್ಟಿ ಹಾಕಿದ್ದ ದುರುಳರು!

Share Post