ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯವಿಲ್ಲ-ಹೈಕೋರ್ಟ್
ಬೆಂಗಳೂರು: ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಬಾರದು. ಆದರೆ ವಿದ್ಯಾರ್ಥಿಗಳು ಕನ್ನಡ ಕಲಿಯಲು ಅಡ್ಡಿಯಿಲ್ಲವೆಂದು ಸರ್ಕಾರಕ್ಕೆ ಹೈಕೋಟ್‌ನ ವಿಭಾಗೀಯ ಪೀಠ ತಿಳಿಸಿದೆ. ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋಟ್‌ನ ವಿಭಾಗೀಯ ಪೀಠ, ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯವಲ್ಲ. ಮುಂದಿನ ಆದೇಶದವರೆಗೂ ಬಲವಂತವಾಗಿ ಕಡ್ಡಾಯ ಮಾಡೋದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.