Politics

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ

ಬೆಂಗಳೂರು; ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದಾರೆ.. ಇದಕ್ಕೆ ಮೊದಲು ಅನುಮತಿ ಕೊಡಲ್ಲ ಎಂದಿದ್ದ ಸರ್ಕಾರ ಈಗ ಯೂಟರ್ನ್‌ ಹೊಡೆದು, ಪಾದಯಾತ್ರೆಗೆ ಅನುಮತಿ ನೀಡಿದೆ.

ಇದನ್ನೂ ಓದಿ; ವಿಷವಾಯಿತೇ ಮಟನ್‌ ಊಟ..?; ಊಟ ಮಾಡಿ ಮಲಗಿದ ಆ ನಾಲ್ವರು ಏಳಲೇ ಇಲ್ಲ!

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದಿದ್ದಾರೆ.. ಅವರು ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ. ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಪಾದಯಾತ್ರೆ ನಡೆಸಲು ಅನುಮತಿ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ಓದಿ; ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಮುಂದಿನ ಸಿಎಂ ಯಾರು..?

ಆದ್ರೆ ಇಂದು ಬೆಳಗ್ಗೆ ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರು ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಹೇಳಿದ್ದರು.. ಕೆಲ ದಿನಗಳ ಹಿಂದೆ ಪರಮೇಶ್ವರ್‌ ಅವರು ಕೂಡಾ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದರು.. ಆದ್ರೆ ಇದೀಗ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ..

Share Post