CrimeDistricts

ಬೆಳಗಾವಿಯ ಸೆಲೋ ಟೇಪ್‌ ಕಾರ್ಖಾನೆಯಲ್ಲಿ ಭಾರೀ ಸ್ಫೋಟ!

ಬೆಳಗಾವಿ; ಸ್ನೇಹಂ ಹೆಸರಿನ ಸೆಲೋ ಟೇಪ್‌ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕಾರ್ಖಾನೆ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ.. ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದ ಬಳಿಯ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.. ಘಟನೆಯಲ್ಲಿ ಓರ್ವ ಕಾರ್ಮಿಕ ಕಾಣೆಯಾಗಿದ್ದಾನೆ.

ಇದನ್ನೂ ಓದಿ; ಸ್ವಂತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ತಾಯಿ!

ರಾತ್ರಿ ವೇಳೆ ಕೂಡಾ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿತ್ತು.. ಈ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಬಂದಿದೆ.. ಇದರಿಂದ ಆತಂಕಗೊಂಡ ಕಾರ್ಮಿಕರು ಅಲ್ಲಿಂದ ಹೊರಗೆ ಓಡಿಬಂದಿದ್ದಾನೆ.. ಆದ್ರೆ ಓರ್ವ ಕಾರ್ಮಿಕ ಮಾತ್ರ ಏನಾದ ಅನ್ನೋದು ಗೊತ್ತಾಗಿಲ್ಲ.. ಇನ್ನು ಕಾರ್ಮಿಕರು ಹೊರಬರುತ್ತಿದ್ದಂತೆ ಬೆಂಕಿ ಇಡೀ ಕಾರ್ಖಾನೆ ಆವರಿಸಿದೆ.. 15ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಿದವು. ಹಲವು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿ ಹತೋಟಿಗೆ ಬಂದಿದೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಕೊನೆಗೂ ಗೃಹಲಕ್ಷ್ಮಿಯರಿಗೆ ಶುಭಸುದ್ದಿ; ಇಂದಿನಿಂದ ಹಣ ಜಮೆ!

ಬೆಂಕಿ ತಗುಲಿ ಮೂವರು ಗಾಯಗೊಂಡಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.. ಇನ್ನು ಕಾರ್ಖಾನೆಯಲ್ಲಿ ಮಾರ್ಕಂಡೇಯ ನಗರದ ನಿವಾಸಿ ಯಲ್ಲಪ್ಪ ಗೂಂಡ್ಯಾಗೋಳ ಎಂಬಾತ ಕಾಣೆಯಾಗಿದ್ದಾನೆ.. ಬೆಂಕಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.. ಹೀಗಾಗಿ ಕಾರ್ಮಿಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಖಾನೆ ಮಾಲೀಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ..

ಇದನ್ನೂ ಓದಿ; ಪೋಸ್ಟಾಫೀಸ್‌ ಆರ್‌ಡಿ; ತಿಂಗಳಿಗೆ 5 ಸಾವಿರ ಹೂಡಿಕೆ, ಕೈಗೆ ಬರೋದು 8 ಲಕ್ಷ ರೂಪಾಯಿ!

Share Post