BengaluruPolitics

ಅಕ್ರಮ ವರ್ಗಾವಣೆ; ಎರಡು ಬ್ಯಾಂಕ್‌ಗಳಲ್ಲಿನ ಎಲ್ಲಾ ಸರ್ಕಾರಿ ಖಾತೆ ಕ್ಲೋಸ್‌!

ಬೆಂಗಳೂರು(Bengaluru); ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣ ಈಗಲೂ ಸದ್ದು ಮಾಡುತ್ತಿದೆ.. ಹೀಗಿರುವಾಗಲೇ ಸರ್ಕಾರ ಕಠಿಣ ನಿಲುವು ತಾಳಿದೆ.. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದಲೇ ಹಣ ಅಕ್ರಮ ವರ್ಗಾವಣೆಯಾಗಿದೆ.. ಪದೇ ಪದೇ ಇಂತಹ ಪ್ರಕರಣಗಳು ಕೇಳಿಬರುತ್ತಿರುವುದರಿಂದ ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲಾ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಮುಚ್ಚುವುದಕ್ಕೆ ಸರ್ಕಾರ ಆದೇಶ ಮಾಡಿದೆ.. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್​ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್‌ ಮಾಡಲಾಗುತ್ತದೆ..
ಈ ಎರಡೂ ಬ್ಯಾಂಕ್‌ಗಳಲ್ಲಿ ಸರ್ಕಾರದ ಠೇವಣಿಗಳನ್ನು ಹಿಂಪಡೆಯಲಾಗುತ್ತದೆ.. ಜೊತೆಗೆ ರಾಜ್ಯ ಸರ್ಕಾರ ಎಲ್ಲಾ ಇಲಾಖೆ, ನಿಗಮ ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಉದ್ದಿಮೆಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ತಿಳಿದುಬಂದಿದೆ..

 

Share Post