ಪ್ರಾಸಿಕ್ಯೂಷನ್‌ಗೆ ಅನುಮತಿ; ಹೈಕೋರ್ಟ್‌ನಲ್ಲಿ ಸಿಎಂ ಚಾಲೆಂಜ್
ಬೆಂಗಳೂರು; ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆಯಾಗಿದೆ ಎಂದು ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಆದ್ರೆ ಇದು ದುರುದ್ದೇಶಪೂರ್ವಕವಾಗಿದ್ದು, ರಾಜಕೀಯ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ಚಾಲೆಂಜ್ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ..
ಕಳೆದ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಅವರು ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಚರ್ಚೆ ನಡೆಸಿದ್ದಾರೆ.. ಇಂದು ಬೆಳಗ್ಗೆ ಕೂಡಾ ಹಲವು ಕಾನೂನು ತಜ್ಞರನ್ನು ಕರೆಸಿ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸುತ್ತಿದ್ದಾರೆ.. ಸೋಮವಾರ ಹೈಕೋರ್ಟ್ ಮೊರೆಹೋಗುವ ಸಾಧ್ಯತೆ ಇದೆ..
ಇನ್ನು ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದಾರೆ.. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ಹೀಗಾಗಿ ಆಗಸ್ಟ್ 20ರಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆ ಮಹತ್ವ ಪಡೆದುಕೊಂಡಿದೆ..