BengaluruCrimePolitics

ಸಂಜೆ 5 ಗಂಟೆಗೆ ರಾಜ್ಯ ಸಂಪುಟ ಸಭೆ!; ರಾಜೀನಾಮೆ ಕೊಡ್ತಾರಾ ಸಿಎಂ?

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ  ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.. ಸಭೆಯಲ್ಲಿ ಸರ್ಕರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಈ ವಿಶೇಷ ಸಂಪುಟ ಸಭೆ ಕರೆಯಲಾಗಿದ್ದು, ಸಂಜೆ ನಡೆಯುವ ಸಭೆ ಹಾಗೂ ಅದರಲ್ಲಿನ ತೀರ್ಮಾನ ಕುತೂಹಲ ಕೆರಳಿಸಿದೆ..

ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಅವರು ಮನವಿ ಮೇರೆಗೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ.. ಇದರ ಆಧಾರದ ಮೇಲೆ ಮೂವರೂ ಜನಪ್ರನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ದೂರು ದಾಖಲಾಗಲಿದೆ.. ಕೋರ್ಟ್‌ ಯಾವ ಯಾವ ತೀರ್ಮಾನ ಮಾಡುತ್ತೆ ಅನ್ನೋದರ ಮೇಲೆ ಸಿದ್ದರಾಮಯ್ಯ ವಿರುದ್ಧ ಹೇಗೆ ವಿಚಾರಣೆ ನಡೆಯಲಿದೆ ಅನ್ನೋದು ತೀರ್ಮಾನ ಆಗಲಿದೆ.. ಕೋರ್ಟ್‌ ವಿಚಾರಣೆ ನಡೆಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟರೆ ಸಿಎಂ ಸಿದ್ದರಾಮಯ್ಯ ಬಂಧನವಾಗುವ ಸಾಧ್ಯತೆಯೂ ಇದೆ.. ಈ ಹಿನ್ನೆಲೆಯಲ್ಲಿ ಕಾನೂನೂ ಹೋರಾಟ ಹೇಗಿರಬೇಕು ಎಂಬುದರ ಬಗ್ಗೆ ಸಂಜೆಯ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ..

ರಾಜ್ಯಪಾಲರ ತೀರ್ಮಾನದ ವಿರುದ್ಧ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಚಾಲೆಂಜ್‌ ಮಾಡಬಹುದು.. ರಾಜ್ಯಪಾಲರು ರಾಜಕೀಯ ಒತ್ತಡದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ಅದಕ್ಕೆ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಕೋರುವ ಅವಕಾಶವಿದೆ.. ಆ ಬಗ್ಗೆ ಈಗಾಗಲೇ ಕಾನೂನು ಪಂಡಿತರ ಜೊತೆ ಚರ್ಚೆ ನಡೆದಿದೆ.. ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿ, ನಾನು ತಪ್ಪು ಮಾಡಿಲ್ಲ. ವಿಚಾರಣೆ ನಡೆಯಲಿ ಎಂದು ತೀರ್ಮಾನ ಕೂಡಾ ಮಾಡಬಹುದು. ಅಂತಹ ತೀರ್ಮಾನ ಏನಾದರೂ ಮಾಡಿದರೆ, ಸಿಎಂ ಸ್ಥಾನದಲ್ಲಿದ್ದುಕೊಂಡು ವಿಚಾರಣೆ ಎದುರಿಸುವುದು ಕಷ್ಟವಾಗಬಹುದು..

ಇನ್ನು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೆಚ್ಚು ಮಾಡಬಹುದು.. ಇದನ್ನು ಸರ್ಕಾರ ಹೇಗೆ ಎದುರಿಸುತ್ತದೆ.. ಒಂದು ವೇಳೆ ಹೈಕೋರ್ಟ್‌ಗೆ ಹೋದರೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್‌ ಸಿಗುತ್ತಾ ನೋಡಬೇಕು..

Share Post