ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!
ಬೆಂಗಳೂರು; ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ಕೊಟ್ಟಿದೆ.. ಸಿಎಂ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.. ಇದರಿಂದಾಗಿ, ಸಿದ್ದರಾಮಯ್ಯ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ..
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ವಾದ ಪ್ರತಿವಾದ ನಡೆಯಿತು.. ಸಿದ್ದರಾಮಯ್ಯ ಪರ ವಕೀಲರಲ್ಲಿ ಒಬ್ಬರಾದ ಅಭಿಷೇಕ್ ಮನು ಸಿಂಘ್ವಿ ಅವರು ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಕೋರಿದ್ದಾರೆ.. ಇದನ್ನು ಕೋರ್ಟ್ ಪುರಸ್ಕರಿಸಿದೆ..
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಾಳೆ ವಿಚಾರಣೆ ಇತ್ತು.. ಟಿ.ಜೆ.ಅಬ್ರಹಾಂ ಸೇರಿ ಮೂವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಮನವಿ ಸಲ್ಲಿಸಿದ್ದರು.. ಇತ್ತ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.. ಹೀಗಾಗಿ ನಾಳೆಯ ವಿಚಾರಣೆ ಬಗ್ಗೆ ಎಲ್ಲರ ಕುತೂಹಲ ಇತ್ತು.. ಖಾಸಗಿ ದೂರುಗಳನ್ನು ವಿಚಾರಣೆಗೆ ಸ್ವೀಕರಿಸಬೇಕೇ, ಬೇಡವೇ ಎಂಬುದನ್ನು ನಾಳೆ ಕೋರ್ಟ್ ತೀರ್ಮಾನಿಸಬೇಕಿತ್ತು. ಆದ್ರೆ ಹೈಕೋರ್ಟ್, ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡುವಂತೆ ಸೂಚನೆ ಕೊಟ್ಟಿದೆ.. ಈ ಹಿನ್ನೆಲೆಯಲ್ಲಿ ಅಂದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಸಿದ್ದರಾಮಯ್ಯ ಅವರ ಭವಿಷ್ಯ ನಿಂತಿದೆ.