NationalPolitics

2 ತಿಂಗಳ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಫಿಕ್ಸ್‌!?

ಬೆಂಗಳೂರು; ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದರು.. ಮುಡಾ ಹಗರಣದ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಅವರು ನಿನ್ನೆ ದೆಹಲಿಗೆ ಹೋಗಿದ್ದರು.. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರು ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.. ಐದಾರು ಸಚಿವರ ಕಾರ್ಯವೈಖರಿ ಸರಿಯಾಗಿಲ್ಲ.. ಅವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳಿಂದ ಗೊತ್ತಾಗಿದೆ..

ಇದನ್ನೂ ಓದಿ; ಕೋರ್ಟ್‌ ವ್ಯತಿರಿಕ್ತ ತೀರ್ಪು ಕೊಟ್ಟರೆ ಮುಂದೇನು..?; ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದ್ದೇನು..?

ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ ನಾಯಕರು ಪ್ರಸ್ತಾಪ ಮಾಡಿದಾಗ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚೆ ನಡೆಸೋದಕ್ಕೆ ಮತ್ತೊಮ್ಮೆ ಬರೋದಾಗಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.. ಇನ್ನು ಹೈಕಮಾಂಡ್‌ ನಾಯಕರು ಕೂಡಾ ಜಾರ್ಖಂಡ್‌, ಹರ್ಯಾಣ ಹಾಗೂ ಜಮ್ಮು-ಕಾಶ್ಮೀರದ ಚುನಾವಣೆ ಇದೆ.. ಈ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆ ಬೇಡ.. ಚುನಾವಣೆ ಬಳಿಕ ಅಂದ್ರೆ ಎರಡು ತಿಂಗಳ ಬಳಿಕ ಈ ಬಗ್ಗೆ ಚರ್ಚೆ ಮಾಡೋಣ.. 5-7 ಸಚಿವರ ಕಾರ್ಯವೈಖರಿ ಸರಿಯಿಲ್ಲ. ನಾವು ತರಿಸಿಕೊಂಡಿರುವ ವರದಿ ಪ್ರಕಾರ ಇಂತಹ ಸಚಿವರನ್ನು ಕೈಬಿಡುವುದು ಒಳ್ಳೆಯದು ಎಂದು ಹೈಕಮಾಂಡ್‌ ಹೇಳಿದ್ದಾರೆ ಎನ್ನಲಾಗಿದೆ..

ಇದನ್ನೂ ಓದಿ; ಸುಂದರಿ ಪತ್ನಿಯ ಕೊಂದು ಮನೆಯಲ್ಲೇ ಕುಳಿತಿದ್ದ ಪಾಪಿ ಗಂಡ!

Share Post