ಬಸ್ ಪ್ರಯಾಣ ದರ ಏರಿಕೆಯ ಸುಳಿವು ಕೊಟ್ರಾ ಸಾರಿಗೆ ಸಚಿವರು..?
ಬೆಂಗಳೂರು; ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸಿದಂತೆ ಕಾಣುತ್ತಿದೆ.. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ಬಸ್ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..
ಇದನ್ನೂ ಓದಿ; ನಿವೃತ್ತಿ ಘೋಷಣೆ ಮಾಡಿದ ಟೀಂ ಇಂಡಿಯಾ ಆಟಗಾರ ಶಿಖರ್ ಧವನ್!
ಟ್ವೀಟ್ ಮಾಡಿರುವ ಸಚಿವ ರಾಮಲಿಂಗಾರೆಡ್ಡಿಯವರು, ಬಿಜೆಪಿ ಸರ್ಕಾರವಿದ್ದಾಗ ಸಾರಿಗೆ ಸಂಸ್ಥೆಗಳನ್ನು ನಷ್ಟದಲ್ಲಿಟ್ಟಿತ್ತು.. ಬಿಜೆಪಿ ಸರ್ಕಾರ ಅಧಿಕಾರದಿಂದ ಇಳಿದಾದ ಕೆಎಸ್‌ಆರ್‌ಟಿಸಿ 5900 ಕೋಟಿ ರೂಪಾಯಿ ನಷ್ಟದಲ್ಲಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.. ಇದನ್ನೆಲ್ಲಾ ನೋಡ್ತಾ ಇದ್ರೆ ಅವರು ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.. ಶಕ್ತಿ ಯೋಜನೆ ಜಾರಿಯಿಂದ ಸಾರಿಗೆ ಇಲಾಖೆಗೆ ಸಾಕಷ್ಟು ನಷ್ಟವಾಗಿದೆ.. ಇದನ್ನು ಸರಿದೂಗಿಸಲು ಪ್ರಯಾಣ ದರ ಏರಿಕೆ ಮಾಡುವ ಸಾಧ್ಯತೆ ಹೆಚ್ಚಿದೆ..
ಇದನ್ನೂ ಓದಿ; ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ..?; ಬದಲಾದರೆ ಡಿಕೆಶಿಗೆ ಯಾವ ಹುದ್ದೆ..?
ಈಗಾಗಲೇ ನೀರಿನ ದರ ಸೇರಿದಂತೆ ಹಲವು ದರಗಳನ್ನು ಏರಿಕೆ ಮಾಡಲು ಸರ್ಕಾರ ಮುಂದಾಗಿದೆ.. ಇದರ ಜೊತೆಗೆ ಪ್ರಯಾಣ ದರದ ಬರೆಯೂ ಗ್ರಾಹಕರಿಗೆ ಬೀಳೋದು ಬಹುತೇಕ ಖಚತವಾಗಿದೆ.. ಒಂದೆರಡು ಸಭೆಗಳನ್ನು ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ..