ಮಹಿಳೆಯರಿಗೆ ಅವಮಾನ ಆರೋಪ: ಸದನದಲ್ಲಿ ಕ್ಷಮೆಯಾಚಿಸಿದ ರಮೇಶ್‌ಕುಮಾರ್
ಬೆಳಗಾವಿ: ಮಹಿಳೆಯರ ಬಗ್ಗೆ ಅವಹೇಳನಕರ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದ ಕ್ಷಮೆಯಾಚಿಸಿದ್ದಾರೆ. ನನ್ನ ಮಾತುಗಳಿಂದ ಯಾರಿಗೇ ಆದರೂ ನೋವಾಗಿದ್ದರೆ ಅದಕ್ಕೆ ವಿಷಾದಿಸುತ್ತೇನೆ. ಯಾವುದೋ ಒಂದು ಉದಾಹರಣೆ ಕೊಡಲು ಹೋದಾಗ, ನಾನು ರೀತಿ ಹೇಳಿಕೆ ಕೊಟ್ಟಿದ್ದೆ. ಅದು ತಪ್ಪು ಎಂದು ಎಲ್ಲರೂ ಹೇಳುತ್ತಿದ್ದಾರೆ. ಹೀಗಾಗಿ ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ನನ್ನಿಂದ ಅಪರಾಧ ಆಗಿದೆ ಎಂದು ತೀರ್ಮಾನಕ್ಕೆ ಬಂದು ತೀರ್ಪು ಕೊಟ್ಟಿದ್ದಾರೆ. ಆದ್ದರಿಂದ ನಾನು ಕ್ಷಮೆಯಾಚಿಸುತ್ತೇನೆ. ಇನ್ನು ಈ ವಿಚಾರವಾಗಿ ಚರ್ಚೆ ಮಾಡಿ ಕಲಾಪದ ಸಮಯ ಹಾಳು ಮಾಡುವುದು ಬೇಡ ಎಂದು ರಮೇಶ್ ಕುಮಾರ್ ಮನವಿ ಮಾಡಿದರು.