ಕಾಂಗ್ರೆಸ್ ಪ್ರತಿಭಟನೆ; ರಾಜ್ಯಪಾಲರು ಹೇಳಿದ್ದೇನು?
ಬೆಂಗಳೂರು; ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.
ನಂತರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ‘ರಾಜಭವನ ಚಲೋ’ ಮೆರವಣಿಗೆ ನಡೆಸಿದರು. ಈ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.