ಪ್ರಶ್ನೆಗಳ ಭಾಷಾಂತರದಲ್ಲಿ ಲೋಪ; KAS ಮರುಪರೀಕ್ಷೆಗೆ ಸಿಎಂ ಆದೇಶ
ಬೆಂಗಳೂರು; ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದಿಸಲಾದ ಪ್ರಶ್ನೆಗಳು ಅಸಮರ್ಪಕವಾಗಿದ್ದು, ಅರ್ಥವಾಗದಂತಿದ್ದವು.. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದರು.. ಇದು ವಿವಾದಕ್ಕೂ ಕಾರಣವಾಗಿತ್ತು.. ಇದೀಗ ಸಿಎಂ ಈ ಬಗ್ಗೆ ಕ್ರಮ ಕೈಗೊಂಡಿದ್ದು ಮರು ಪರೀಕ್ಷೆಗೆ ಸೂಚನೆ ಕೊಟ್ಟಿದ್ದಾರೆ.. ಇನ್ನೆರಡು ತಿಂಗಳೊಳಗೆ ಮರು ಪರೀಕ್ಷೆ ಮಾಡುವಂತೆ ಹೇಳಿದ್ದಾರೆ..
ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ಅವರು, ಮರು ಪರೀಕ್ಷೆ ಆದೇಶ ಮಾಡಿದ್ದೇನೆ. ಜೊತೆಗೆ ಈ ಲೋಪಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ..
ಇದನ್ನೂ ಓದಿ; ಬಾಂಗ್ಲಾದ ಎಳೆ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ!
ಸಿದ್ದರಾಮಯ್ಯ ಅವರ ಫೇಸ್‌ಬುಕ್ ಪೋಸ್ಟ್‌ನಲ್ಲೇನಿದೆ..?
================================
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ.
ಇದನ್ನೂ ಓದಿ; ಗಂಡ ತನ್ನಿಷ್ಟದ ತಿಂಡಿ ಮಾಡಲಿಲ್ಲ ಅಂತ ಹೆಂಡತಿ ಮಾಡಿದ್ದೇನು ಗೊತ್ತಾ..?