CrimeDistricts

ನಾಗಮಂಗಲದಲ್ಲಿ ಕೋಮು ಗಲಭೆ!; 50 ಮಂದಿ ವಿಚಾರಣೆ!

ಮಂಡ್ಯ; ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮು ಗಲಭೆ ನಡೆದಿದೆ.. ಇದರಿಂದಾಗಿ ನಾಗಮಂಗಲದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ಇದುವರೆಗೂ 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.. ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ..
ನಿನ್ನೆ ಸಂಜೆ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೆರವಣಿಗೆ ಶುರುವಾಗಿತ್ತು.. ಪಟಾಕಿ, ಡೊಳ್ಳು, ತಮಟೆ, ಡಿಜೆ ಸೌಂಡ್‌ನೊಂದಿಗೆ ಮೆರವಣಿಗೆ ನಡೆದಿತ್ತು.. ಮೆರವಣಿಗೆ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಬಂದಾಗ ಮಂಡ್ಯ ಸರ್ಕಲ್ ಬಳಿಯೇ ಕೆಲ ಅನ್ಯಕೋಮಿನ ತಡೆಯೊಡ್ಡಿದ್ದಾರೆ.. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿ ಚಕಮಕಿ ನಡೆದಿದೆ..
ಇನ್ನು ಇದೇ ಸಂದರ್ಭದಲ್ಲಿ ಕಿಡಿಗೇಡಿಗಳು ಮಾರಕಾಸ್ತ್ರಗಳನ್ನೂ ಝಳಪಿಸಿದ್ದಾರೆ.. ಮಂಡ್ಯ ವೃತ್ತದಲ್ಲಿ ನಾಲ್ಕೈದು ಬೈಕ್​ಗಳಿಗೆ ಬೆಂಕಿ ಹಚ್ಚಿದ್ದು, 2-3 ಅಂಗಡಿಗಳನ್ನೂ ಧ್ವಂಸಗೊಳಿಸಲಾಗಿದೆ.. ಇದರಿಂದಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ..

Share Post