NationalPolitics

ಸಿಎಂ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕೇಜ್ರಿವಾಲ್‌

ನವದೆಹಲಿ; ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಕೇಜ್ರಿವಾಲ್‌ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.  ಅಬಕಾರಿ ಹಗರಣದ ಸಂಬಂಧ ಜೈಲು ಸೇರಿದ್ದರೂ ಕೂಡಾ ಅವರು ರಾಜೀನಾಮೆ ನೀಡಿರಲಿಲ್ಲ. ಆದ್ರೆ ಇಂದು ಅವರು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ಎರಡು ದಿನಗಳ ನಂತರ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.
ದೆಹಲಿಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಆಗ ದೆಹಲಿಯ ಜನರು ತೀರ್ಪು ನೀಡುವರು. ಈಗಾಗಲೇ ನ್ಯಾಯಾಲಯದಿಂದ ನನಗೆ ತೀರ್ಪು ಬಂದಿದೆ. ಈಗ ತೀರ್ಪು ಜನರಿಂದ ಬರಬೇಕಿದೆ.. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಜನರ ತೀರ್ಪಿನ ಆಧಾರದ ಮೇಲೆ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಮದ್ಯ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಇಡಿ ಮತ್ತು ಸಿಬಿಐ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಆರು ತಿಂಗಳ ಹಿಂದೆ ಬಂಧಿಸಿದ್ದರು. ಅಂದಿನಿಂದ ಕೇಜ್ರಿವಾಲ್ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

Share Post