BengaluruPolitics

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!; ವರದಿ ಕೇಳಿದ ರಾಜ್ಯಪಾಲರು!

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಭಾರೀ ಸಂಕಷ್ಟ ಎದುರಾಗಿದೆ.. ಮುಡಾ ವಿಚಾರದಲ್ಲೇ ಮತ್ತೊಂದು ದೂರು ಬಂದಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ.. ರಾಜ್ಯ ಸರ್ಕಾರದ ಮುಂಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪತ್ರ ಬರೆದು ವರದಿ ಕೇಳಿದ್ದಾರೆ..
ಆಗಸ್ಟ್‌ 27ರಂದು ಮೈಸೂರಿನ ನಟರಾಜ್‌ ಎಂಬುವವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು.. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಆದೇಶ ಪಾಲನೆ ಮಾಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ.. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ಅನ್ನು ಉಲ್ಲಂಘನೆ ಮಾಡಿ ಸಿಎಂ ಮೌಖಿಕ ಆದೇಶ ನೀಡಿದರು ಎಂಬ ಕಾರಣಕ್ಕೆ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ 387 ಕೋಟಿ ರೂಪಾಯಿಗಳ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ..
ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಕೂಡಾ ಸಿಎಂ ಮೌಖಿಕ ಆದೇಶ ನೀಡಿದರು ಎಂಬ ಕಾರಣಕ್ಕೆ ಮುಡಾ ಈ ತೀರ್ಮಾನ ಕೈಗೊಂಡಿದೆ.. ಪ್ರಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಇದನ್ನು ಪರಿಶೀಲಿಸಲು ಮತ್ತು ವಿವರವಾದ ವರದಿಯನ್ನು ದಾಖಲೆ ಸಮೇತ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ರವಾನೆ ಮಾಡಿದ್ದಾರೆ.

Share Post