ಮತಾಂತರ ನಿಷೇಧ ಕಾಯ್ದೆಗೆ ವಿರೋಧ
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಗೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವುದಕ್ಕೆ ನಾವು ವಿರೋಧಪಡಿಸುತ್ತೇವೆ. ಒಂದುವೇಳೆ ಹಾಗೆನಾದ್ರೂ ಮಾಡಿದರೆ, ೨೦೨೩ಕ್ಕೆ ನಮ್ಮ ಸರ್ಕಾರ ಬಂದ ಕೂಡಲೇ ವಾಪಸ್ ತೆಗೆದುಕೊಳ್ಳುತ್ತೇವೆ ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಸುವರ್ಣ ಸೌಧದ ಬಳಿ ಭಾರತೀಯ ಕ್ರೈಸ್ತ ಒಕ್ಕೂಟದಿಂದ ಹಮ್ಮಿಕೊಂಡಿರುವ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಸಿದ್ದರಾಮಯ್ಯ ಮಾತನಾಡಿ,ಈಗಾಗಲೇ ನಾವು ನಮ್ಮ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದಿದ್ದಾರೆ. ಹೀಗಾಗಿ ನಮ್ಮ ಪಕ್ಷವು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧ ಮಾಡುತ್ತೇವೆ ಎಂದರು.