ಶಾಸಕ ಮುನಿರತ್ನ ಮತ್ತೆ ಜೈಲು ಪಾಲು!
ಬೆಂಗಳೂರು; ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಅವರು ಮತ್ತೆ ಜೈಲು ಸೇರಿದ್ದಾರೆ.
ನ್ಯಾಯಾಲಯ ಇಂದು ಆದೇಶ ನೀಡಿದೆ.ನಿನ್ನೆಯಷ್ಟೇ ಜೈಲಿನಿಂದ ರಿಲೀಸ್ ಆಗಿದ್ದ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.
ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.