ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್, ಇದೀಗ ಪ್ರಕರಣದಲ್ಲಿ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯದಿಂದಾಗಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಲಾಗಿದೆ.
ಇಂತಹ ಕೊಲೆ ಆರೋಪಿ ನಟ ದರ್ಶನ್ ಇಂದು ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿಯನ್ನು ತಮ್ಮ ಪರ ವಕೀಲರ ಮೂಲಕ ಸಲ್ಲಿಸಿದ್ದಾರೆ.