ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಯ ಭೀಕರ ಹತ್ಯೆ!
ಕಾರವಾರ; ಉತ್ತರಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಈ ಕೃತ್ಯ ಎಸಗಲಾಗಿದೆ..
ಮಹಾರಾಷ್ಟ್ರ ಮೂಲದ ಉದ್ಯಮಿ ವಿನಾಯಕ ನಾಯಕ ಎಂಬುವವರೇ ಕೊಲೆಯಾದವರು.. ಹಣಕೋಣ ಗ್ರಾಮದಲ್ಲಿರುವ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಉದ್ಯಮಿ ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ತೀವ್ರ ದಾಳಿ ಮಾಡಿದ್ದಾರೆ.. ಇದರಿಂದಾಗಿ ಉದ್ಯಮಿ ವಿನಾಯಕ ನಾಯಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಅವರ ಪತ್ನಿ ಮೇಲೆ ಕೂಡಾ ಮಾರಾಣಾಂತಿಕ ಹಲ್ಲೆ ನಡೆದಿದೆ.. ಅವರನ್ನು ಕಾರವಾರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ..
ಕಾರವಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..