BengaluruCrime

Breaking; ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಉಳಿಯುತ್ತಾ ಸಿಎಂ ಸ್ಥಾನ..?

ಬೆಂಗಳೂರು; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿಗೆ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿದೆ.. ನ್ಯಾಯಮೂರ್ತಿ ನಾಗಪ್ರಸನ್ನ ಈ ತೀರ್ಪು ನೀಡಿದ್ದು, ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಲಾಗಿದೆ.. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ..

ಟಿ.ಜೆ.ಅಬ್ರಹಾಂ, ಪ್ರದೀಪ್‌ ಹಾಗೂ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.. ಅವರ ಮನವಿ ಪುರಸ್ಕರಿಸಿದ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.. ಆದ್ರೆ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ.. ಆದರೂ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಇದು ರಾಜಕೀಯಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.. ರಾಜ್ಯಪಾಲರ ಪ್ರಾಸಕ್ಯೂಷನ್‌ ಆದೇಶಕ್ಕೆ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು..

ಆರು ದಿನಗಳ ಕಾಲ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಿದ್ದು, ಖಾಸಗಿ ದೂರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದು ಎಂದು ಕೋರ್ಟ್‌ ಹೇಳಿದೆ.. ಈ ಮೂಲಕ ರಾಜ್ಯಪಾಲರ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.. ಇದರಿಂದಾಗಿ ರಾಜ್ಯಪಾಲರ ಆದೇಶಕ್ಕೆ ಅವಕಾಶ ಸಿಕ್ಕಿದೆ..

ಇದೀಗ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಅಬ್ರಹಾಂ, ಪ್ರದೀಪ್‌ ಹಾಗೂ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ತೀರ್ಪು ಬರಲಿದೆ.. ಜನಪ್ರತಿನಿಧಿಗಳ ಕೋರ್ಟ್‌ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ಕೊಟ್ಟರೆ ಸಿದ್ದರಾಮಯ್ಯ ವಿಚಾರಣೆ ಎದುರಿಸಬೇಕಾಗುತ್ತದೆ..

Share Post