BengaluruCrime

ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ಕೊಡುತ್ತಾ ಜನಪ್ರತಿನಿಧಿಗಳ ಕೋರ್ಟ್‌?

ಬೆಂಗಳೂರು; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ.. ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.. ಹೀಗಾಗಿ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಖಾಸಗಿ ದೂರುಗಳ ಆದೇಶ ಏನು ಬರಲಿದೆ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ..

ಟಿ.ಜೆ.ಅಬ್ರಹಾಂ, ಪ್ರದೀಪ್‌ ಹಾಗೂ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.. ಆದ್ರೆ, ಇದರ ವಿಚಾರಣೆಗೆ ಹೈಕೋರ್ಟ್‌ ತಡೆ ಕೊಟ್ಟಿತ್ತು.. ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ತೀರ್ಪು ಬರುವವರೆಗೂ ತಡೆ ನೀಡಲಾಗಿತ್ತು.. ಇದೀಗ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ ಮಾಡಲಾಗಿದೆ.. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕೋರ್ಟ್‌ ಯಾವಾಗ ಈ ಅರ್ಜಿಯ ವಿಚಾರಣೆ ನಡೆಸುತ್ತೆ.. ಏನು ಆದೇಶ ಕೊಡುತ್ತೆ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ..
ಹೈಕೋರ್ಟ್‌ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ ವಿಭಾಗೀಯ ಪೀಠ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.. ನಾಳೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.. ಅದಕ್ಕೂ ಮೊದಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಖಾಸಗಿ ದೂರುಗಳನ್ನು ವಿಚಾರಣೆ ಕೈಗೆತ್ತಿಕೊಂಡು ರಾಜ್ಯಪಾಲರ ಆದೇಶ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಅನುಮತಿ ನೀಡಿದರೆ, ಸಿಎಂಗೆ ಸಂಕಷ್ಟ ಶುರುವಾಗುತ್ತದೆ..

ಜನಪ್ರತಿನಿಧಿಗಳ ಕೋರ್ಟ್‌ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಅನುಮತಿ ಕೊಟ್ಟರೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ.. ಈ ಸಂದರ್ಭದಲ್ಲಿ ಅಗತ್ಯಬಿದ್ದರೆ ಬಂಧನವೂ ಆಗಬಹುದು.. ಹಾಗೇನಾದರೂ ಆದರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕಂಟಕ ಶುರುವಾಗುತ್ತದೆ.. ಹೀಗಾಗಿ, ಮೇಲ್ಮನವಿ ಹಾಗೂ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಬರುವ ತೀರ್ಪಿನ ಮೇಲೆ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ನಿಂತಿದೆ..

Share Post