2 ಲಕ್ಷ ರೂಪಾಯಿವರೆಗೆ ಕೃಷಿ ಸಾಲ ಮನ್ನಾ ಮಾಡಲು ನಿರ್ಧಾರ!
ಜಾರ್ಖಂಡ್; ಜಾರ್ಖಂಡ್ ಸರ್ಕಾರ ಅಲ್ಲಿನ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.. ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಲು ಅಲ್ಲಿ ಸರ್ಕಾರ ನಿರ್ಧಾರ ಮಾಡಿದೆ.. ಈ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಣೆ ಮಾಡಿದ್ದಾರೆ.. ಸುಮಾರು 38 ಲಕ್ಷ ರೈತರ 400 ಕೋಟಿ ರೂಪಾಯಿ ಮನ್ನಾ ಮಾಡಿ ಜಾರ್ಖಂಡ್ ಘೋಷಣೆ ಮಾಡಿದ್ದಾರೆ..
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲಾಗಿದ್ದು, ಮೊದಲ ಹಂತದಲ್ಲಿ 50 ಸಾವಿರ ರೂಪಾಯಿ ಸಾಲ ಮನ್ನಾ ಮಾಡಲಾಗುತ್ತದೆ.. ನಂತರ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ 2 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಲು ನಿರ್ಧಾರ ಮಾಡಲಾಗಿದೆ.. ರಾಜ್ಯದ ಸುಮಾರು 38 ಲಕ್ಷ ನೋಂದಾಯಿತ ರೈತರ 2 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಮಂತ್ ಸೊರೇನ್ ಹೇಳಿದ್ದಾರೆ..
ಇನ್ನು ಇದಕ್ಕೂ ಮೊದಲು ಸೊರೇನ್ ಸರ್ಕಾರ ಮಯ್ಯಾ ಸಮ್ಮಾನ್ ಯೋಜನೆ ಆರಂಭಿಸಿದ್ದು, ಇದರಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ ನೀಡಲಾಗುತ್ತಿದೆ.. ಜೊತೆಗೆ 200 ಯೂನಿಟ್‌ವರೆಗೆ ವಿದ್ಯುತ್ ಉಚಿತ ನೀಡಲಾಗುತ್ತಿದೆ..